Friday, June 5, 2026
Homeತಾಜಾ ಸುದ್ದಿಡಿವೈಡರ್​ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಲೋಕಾಯುಕ್ತ ಇನ್ಸ್​​ಪೆಕ್ಟರ್ ಸಜೀವ ದಹನ

ಡಿವೈಡರ್​ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಲೋಕಾಯುಕ್ತ ಇನ್ಸ್​​ಪೆಕ್ಟರ್ ಸಜೀವ ದಹನ

- Advertisement -
- Advertisement -

ಧಾರವಾಡ; ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್​​ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ನಡೆದಿದೆ. ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಮೃತರು.

ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಗದಗಕ್ಕೆ ಹೋಗುವಾಗ ಅನಾಹುತ ಸಂಭವಿಸಿದೆ. ಕಾರು ಕೂಡಾ ಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ಬಗ್ಗೆ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!