Friday, June 5, 2026
Homeಕರಾವಳಿಮಂಗಳೂರುಪುತ್ತೂರಿನ ನೆಹರೂ ನಗರದಲ್ಲಿ 21 ಲಕ್ಷ ರೂಪಾಯಿ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ; ಐವರು...

ಪುತ್ತೂರಿನ ನೆಹರೂ ನಗರದಲ್ಲಿ 21 ಲಕ್ಷ ರೂಪಾಯಿ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ; ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಪುತ್ತೂರಿನ ನೆಹರೂ ನಗರದಲ್ಲಿ 21 ಲಕ್ಷ ರೂಪಾಯಿ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಶ್ಲೇಷ ಭಟ್ , ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್ , ವಿಜಯ ಶೆಟ್ಟಿ ,  ಮಹಮ್ಮದ್ ಅಶ್ರಫ್ ಬಂಧಿತರು.

ಪ್ರಕರಣದ ವಿವರ;

 ಕಬಕ ನಿವಾಸಿ ತೃತೇಶ್  (29) ಅವರು KA 19 AB 2258 ನೇ ಲಾರಿಯ ಮಾಲಕ ಮತ್ತು ಚಾಲಕನಾಗಿದ್ದು, ದಿನಾಂಕ: 03-12-2025 ರಂದು ಪಿರಿಯಾ ಪಟ್ಟಣದ ಕಾಫಿ ಕ್ಯೂರಿಂಗ್  ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್ ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದರು. ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ ನೆಹರೂ ನಗರ ಎಂಬಲ್ಲಿ ರಸ್ತೆ ಬದಿಯಲ್ಲಿ ತನ್ನ ಲಾರಿಯನ್ನು ನಿಲ್ಲಿಸಿ ಡೋರ್ ಲಾಕ್ ಮಾಡಿ ತನ್ನ ಮನೆಗೆ ತೆರಳಿದ್ದರು. ದಿನಾಂಕ: 04-12-2025 ರಂದು ಬೆಳಿಗ್ಗೆ ಮರಳಿ ಬಂದು ಲಾರಿಯನ್ನು ಚಲಾಯಿಸುತ್ತಾ ಮಧ್ಯಾಹ್ನ ವೇಳೆ ಮಂಗಳೂರಿನ ಬಂದರಿಗೆ ತಲುಪಿದ್ದಾರೆ. ಈ ವೇಳೆ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಲು ಬಂದಾಗ, ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡು ಬಂದಿದ್ದು, ಲೋಡನ್ನು ಪರಿಶೀಲಿಸಿದಾಗ, ಲಾರಿಯಲ್ಲಿದ್ದ ಕಾಫಿ ಬೀಜ ತುಂಬಿದ ಗೋಣಿಚೀಲಗಳ ಪೈಕಿ ಸುಮಾರು ರೂ 21,44,000/-ಮೌಲ್ಯದ 80 ಗೋಣಿ ಚೀಲಗಳು ಕಳವಾಗಿರುವುದು ಕಂಡು ಬಂದಿರುತ್ತದೆ. ಅದರಂತೆ ತೃತೇಶ್ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಪೊಲೀಸರು ಬಂಧಿತರಿಂದ ಕೃತ್ಯಕ್ಕೆ ಬಳಸಿದ  ಎರಡು ಆಟೋ , ಒಂದು ಗೂ್ಡ್ಸ ಟೆಂಪೋ ಗಳನ್ನು ಹಾಗೂ ಕಳವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!