Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ಪ್ರಕರಣ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಧ್ಯಮ ಹೇಳಿಕೆ ಬಿಡುಗಡೆ

ಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ಪ್ರಕರಣ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಧ್ಯಮ ಹೇಳಿಕೆ ಬಿಡುಗಡೆ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಪ್ರಾಥಮಿಕ ತನಿಖೆಯ ಮಾಹಿತಿಯನ್ನು ಒದಗಿಸಿದೆ ಎಂದು ಮಾಧ್ಯಮಗಳಲ್ಲಿ ನೋಡಿ ತಿಳಿದಿದ್ದೇವೆ. ಇದರನ್ವಯ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ರೂಪಿಸಿರುವುದು ಸ್ಪಷ್ಟವಾಗಿ ತಿಳಿದು ಬರುತ್ತದೆ. ಧಾರ್ಮಿಕ ಶ್ರದ್ಧಾಕೇಂದ್ರಗಳ ಮೇಲಿನ ವ್ಯವಸ್ಥಿತ ಷಡ್ಯಂತ್ರಗಳು ಮೇಲಿಂದ ಮೇಲೆ ನಡೆಯುತ್ತಾ ಬಂದಿದೆ ಎನ್ನುವುದಕ್ಕೆ ಇದೂ ಕೂಡ ಒಂದು ಉದಾಹರಣೆಯೇ.

ಇದೇ ರೀತಿಯ ಷಡ್ಯಂತ್ರ ಮುಂದೆಂದೂ ಮತ್ಯಾವ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲಾಗದಂತೆ ತಡೆಯುವ ಅವಶ್ಯಕತೆಯಿದ್ದು ಸರ್ಕಾರ ಈ ವಿಚಾರವಾಗಿ ಗಮನವಹಿಸಬೇಕೆಂದು ವಿನಂತಿ ಮಾಡುತ್ತೇವೆ. ಈ ಷಡ್ಯಂತ್ರದ ಹಿಂದಿರುವ ಶಕ್ತಿಗಳಿಗೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!