Wednesday, June 24, 2026
Homeಕರಾವಳಿಮಂಗಳೂರುಮೂಡಬಿದರೆ: ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ ದರೋಡೆ ಮಾಡಿದ ಅಪರಿಚಿತರು

ಮೂಡಬಿದರೆ: ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ ದರೋಡೆ ಮಾಡಿದ ಅಪರಿಚಿತರು

- Advertisement -
- Advertisement -

ಮೂಡಬಿದರೆ: ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ ಅಪರಿಚಿತರು ದರೋಡೆ ಮಾಡಿದ ಘಟನೆ ಮಾಂಟ್ರಾಡಿಯಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ. ಕಾರಿನಲ್ಲಿ ಬಂದ ಅಪರಿಚಿತರು ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಈದು ಗ್ರಾಮದ ಮುಹಮ್ಮದ್ ಬಳಿಯಿದ್ದ 19 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

ಮೂಡುಬಿದಿರೆ ಮಾರುಕಟ್ಟೆಯಲ್ಲಿ ಹಣ್ಣು ಹಂಪಲು ವ್ಯಾಪಾರಿಯಾಗಿರುವ ಮುಹಮ್ಮದ್ ಮಂಗಳೂರಿನಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಈದುನಿಂದ ರಿಕ್ಷಾದಲ್ಲಿ ಹೊರಟಿದ್ದರು.

ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡ ಇವರ ರಿಕ್ಷಾವನ್ನು ಅಡ್ಡಗಟ್ಟಿ, ಬೆದರಿಸಿ, 19 ಸಾವಿರ ರೂ. ನಗದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!