- Advertisement -


- Advertisement -
ಸುಳ್ಯ; ಬೆಂಗಳೂರಿನಿಂದ ಊರಿಗೆ ಬರುತ್ತಿದ್ದಾಗ ಬೈಕ್ ಅಪಘಾತವಾಗಿ ಸುಳ್ಯದ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯದ ಮಳವಳ್ಳಿಯಲ್ಲಿ ನಡೆದಿದೆ.
ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತರು.
ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ಟಾರಿನ ತನ್ನ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮಂಡ್ಯದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ದೀಕ್ಷಿತ್‌ರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದರೆನ್ನಲಾಗಿದೆ. ಮೃತರು ತಂದೆ, ತಾಯಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
- Advertisement -


