
ಮಂಗಳೂರು; ಬೆಂಗಳೂರಿನಿಂದ ಮಾದಕ ವಸ್ತು (MDMA) ಯನ್ನು ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದಂತಹ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂಧಿಗಳು ದಿನಾಂಕ:13.12.2025 ರಂದು ಕಾರಿನಲ್ಲಿ ಬರುತ್ತಿದ್ದ ಅಹಮ್ಮದ್ ಶಾಬೀತ್, ಮತ್ತು ಆತನ ತಂಡವನ್ನು ಅರ್ಕುಳ ಬಳಿ ಬಂಧಿಸಿದ್ದಾರೆ.
ಮಂಗಳೂರಿನ ಮಲ್ಲೂರು ಗ್ರಾಮದ ನಿವಾಸಿ, ಸದ್ಯ ಬಿ ಸಿ ರೋಡ್ ನಿವಾಸಿಯಾಗಿರುವ ಅಹಮ್ಮದ್ ಶಾಬೀತ್ (35), ಬಂಟ್ವಾಳದ ಜೋಡು ಮಾರ್ಗ ನಿವಾಸಿ ಮಹಮ್ಮದ್ ಶಂಶೀರ್ (36), ಬಂಟ್ವಾಳದ ಸರಪಾಡಿಯ ಮಠದಬೆಟ್ಟು ನಿವಾಸಿ ನೌಶೀನ( 27) ಬಂಧಿತರು.
ಬಂಧಿತರಿಂದ MDMA ಮಾದಕ ವಸ್ತು 90 ಗ್ರಾಂ ಮೌಲ್ಯ, ಬಿಳಿ ಬಣ್ಣದ KL-58-W-6342 ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಹಮ್ಮದ್ ಶಾಬೀತ್ ಎಂಬುವನು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ನಿರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವಾದ MDMA ಯನ್ನು ತಂದು ಸರಬರಾಜು ಮಾಡುತ್ತಿದ್ದು, ಅಲ್ಲದೇ ಈ ತಂಡದಲ್ಲಿ ಯಾರಿಗೂ ಅನುಮಾನ ಬಾರದಂತೆ ಮಹಿಳೆಯಾದ ಶ್ರೀಮತಿ ನೌಶಿನ ಎಂಬವರನ್ನು ಜೊತೆಗೆ ಇರಿಸಿಕೊಂಡು ಮಾದಕ ವಸ್ತುವಾದ MDMA ಯನ್ನು ಸಾಗಾಟ ಮಾಡುತ್ತಿರುವುದ್ದನ್ನು, ಮಂಗಳೂರು ನಗರದ ಸಿಸಿಬಿ ಘಟಕದ ವಿಭಾಗದ ಅಧಿಕಾರಿ ಮತ್ತು ಸಿಬ್ಬಂಖಚಿತ ಮಾಹಿತಿಯನ್ನು ಕಲೆ ಹಾಕಿ, ಈ ತಂಡವನ್ನು ಬಂಧಿಸಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿತರಿಗೆ ನ್ಯಾಯಾಂಗ ಬಂಧನವಾಗಿರುತ್ತದೆ. ತನಿಖೆ ಮುಂದುವರೆದಿದೆ.


