Sunday, June 7, 2026
HomeWorldಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ

- Advertisement -
- Advertisement -

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ, ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ʻಪಾಪ ಸಿಎಂ ಸಿದ್ದರಾಮಯ್ಯನವರ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು. ಸಿಎಂ ಮಾತಿನ ದಾಟಿ ನೋಡಿದರೆ ನಿಮಗೆ ಅರ್ಥವಾಗುತ್ತದೆ. ಸದನದಲ್ಲಿ ಚರ್ಚಿಸುವುದಕ್ಕೆ ಔಟ್‌ ಗೋಯಿಂಗ್‌ ಮುಖ್ಯಮಂತ್ರಿಗಳಿಂದ ಪರಿಹಾರ ಸಿಗುತ್ತದೆ ಎನ್ನುವ ಆಶಾಭಾವನೆ ಇಲ್ಲ. ಇನ್ನು ನೀವು ಸಿಎಂ ಆಗಿ ಎಷ್ಟು ದಿನ ಇರುತ್ತೀರಾ ಅನ್ನುವುದು ಮುಖ್ಯವಲ್ಲ. ಆ ಸ್ಥಾನದಲ್ಲಿದ್ದು, ರಾಜ್ಯಕ್ಕೆ ಏನು ಕೆಲಸ ಮಾಡಿದ್ದೀರಿ? ಎಂಬುದು ಮುಖ್ಯ. ಸಿದ್ದರಾಮಯ್ಯನವರ ಕೊನೆಯ ಅಧಿವೇಶನದಲ್ಲಾದರೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ ಎಂದು ಹೇಳಿದರು.

- Advertisement -

Latest News

error: Content is protected !!