- Advertisement -
![]()
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2025ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮವು ಡಿ.21ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ 1,41,594 ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡಲಾಗುವುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ.
ಅವರು ಗುರುವಾರದಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿಈ ಬಗ್ಗೆ ಮಾತನಾಡಿ, “ದ.ಕ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ನೀಡಲು 921 ಸ್ಥಿರ ಬೂತ್, 32 ಟ್ರಾನ್ಸಿಟ್ ಹಾಗೂ ಮಂಗಳೂರು ನಗರದಲ್ಲಿ ಮೂರು ಮೊಬೈಲ್ ಬೂತ್ ಸೇರಿದಂತೆ 956 ಬೂತ್‌ಗಳಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
- Advertisement -


