- Advertisement -
![]()
- Advertisement -
ಮಂಗಳೂರು : ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಇಂದು(ಡಿ. ೧೮) ಮನಪಾ ಮೇಯರ್ ಕೊಠಡಿಯಲ್ಲಿ ಫೋನ್ ಇನ್ ಮೂಲಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರನ್ನು ಕಾಡುತ್ತಿರುವ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕಗೊಳಿಸಲು 1200 ಕೋಟಿರೂ.ಗಳ ಪ್ಲಾನ್ ಸಿದ್ಧಪಡಿಸಲಾಗುತ್ತಿದೆ ಎಂದು ಈ ವೇಳೆಯಲ್ಲಿ ತಿಳಿಸಿದರು.
ಇನ್ನು ಸಾರ್ವಜನಿಕರು ಫೋನ್ ಇನ್ ಕಾರ್ಯಕ್ರಮದ ಮೂಲಕ ಮಳೆ ನೀರು ಹರಿಯುವ ಚರಂಡಿಗಳಲ್ಲಿ ಅಪಾರ್ಟ್‌ಮೆಂಟ್, ಮನೆಗಳ ಕೊಳಚೆ ನೀರು ಹರಿಯುತ್ತಿರುವುದು, ರಾಜಕಾಲುವೆಗಳಿಗೆ ಕೊಳಚೆ ನೀರು ಸೇರುತ್ತಿರುವ ಸಮಸ್ಯೆಗಳ ಕುರಿತಂತೆ ಹಲವು ಸಾರ್ವಜನಿಕರು ದೂರು ನೀಡಿದರು.
ಅಂದಾಜು 1200 ಕೋಟಿ ರೂ. ವೆಚ್ಚ ಮುಂಬರುವ ಬಜೆಟ್‌ನಲ್ಲಿ ಮಂಡನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
- Advertisement -


