Wednesday, June 24, 2026
Homeಕರಾವಳಿಉಡುಪಿತಂದೆಗೆ ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ; ಚೈತ್ರಾ ಕುಂದಾಪುರಾಗೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಿಂದ ಆದೇಶ

ತಂದೆಗೆ ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ; ಚೈತ್ರಾ ಕುಂದಾಪುರಾಗೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಿಂದ ಆದೇಶ

- Advertisement -
- Advertisement -

ಕುಂದಾಪುರ: ತಂದೆಗೆ ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ ಎಂದು ಚೈತ್ರಾ ಕುಂದಾಪುರ ಅವರಿಗೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ.

ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕು. ಅವರ ಸ್ವತ್ತಿನ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ಮುಚ್ಚಳಿಕೆ ನೀಡಬೇಕು ಎಂದು ಎಂದು ಇಲ್ಲಿನ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ.

ಬಾಲಕೃಷ್ಣ ಅವರು ಪುತ್ರಿ ಚೈತ್ರಾ ಕುಂದಾಪುರ ಅವರಿಂದ ಅನ್ಯಾಯ ಆಗುತ್ತಿದೆ. ನನ್ನ ಮನೆಯಲ್ಲಿ ವಾಸಿಸಲು ಅವಕಾಶ ನೀಡಬೇಕೆಂದು ಕೋರಿ ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ ಅನ್ವಯ ಪರಿಹಾರ ಕೋರಿ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧದ ಕೋರ್ಟ್‌ ತೀರ್ಪು ನೀಡಿದೆ.

- Advertisement -

Latest News

error: Content is protected !!