- Advertisement -
![]()
- Advertisement -
ಉಡುಪಿ: ಮಣಿಪಾಲದ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪಲ್ಲವಿ ಭಟ್(34) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೆ ಶನಿವಾರದಂದು ನಿಧನರಾಗಿದ್ದಾರೆ.
ಅವರು ಆಟೊ ಇಮ್ಯುನೋ ಖಾಯಿಲೆಯಿಂದಾಗಿ ಒಂದು ವಾರದ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಪಲ್ಲವಿ ಭಟ್ ಮಾಧವ ಕೃಪಾ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿಕ್ಷಕಿಯ ಅಕಾಲಿಕ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.
- Advertisement -


