Saturday, June 6, 2026
Homeತಾಜಾ ಸುದ್ದಿಕೊರೋನಾ ರಣಕೇಕೆ: ರಾಜ್ಯದಲ್ಲಿ ಇಂದು ಕೊರೋನಾ ಪಾಸಿಟಿವ್ ಆದವರ ಅಂಕಿಅಂಶ

ಕೊರೋನಾ ರಣಕೇಕೆ: ರಾಜ್ಯದಲ್ಲಿ ಇಂದು ಕೊರೋನಾ ಪಾಸಿಟಿವ್ ಆದವರ ಅಂಕಿಅಂಶ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಶನಿವಾರ ಸಂಜೆಯಿಂದ ರವಿವಾರ ಸಂಜೆವರೆಗೆ ಮತ್ತೆ 5,532 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 1,34,819ಕ್ಕೆ ಏರಿಕೆಯಾಗಿದೆ.

24 ಗಂಟೆಗಳಲ್ಲಿ 84 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 2,496ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಕೋವಿಡ್‌ ಮಹಾಮಾರಿಯ ಆರ್ಭಟ ಎಂದಿನಂತೆ ಮುಂದುವರಿದಿದ್ದು, 2105 ಹೊಸ ಪ್ರಕರಣಗಳು ವರದಿಯಾಗಿವೆ. ಅಲ್ಲದೆ ನಗರದಲ್ಲಿ ಇಂದು 21 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

- Advertisement -

Latest News

error: Content is protected !!