Wednesday, June 24, 2026
HomeWorldಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

- Advertisement -
- Advertisement -

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ದೆಹಲಿ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ನ್ಯಾಷನ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಲ್ಲಿಸಿರುವ ಮೇಲ್ಮನವಿಗೆ ಪ್ರತಿಕ್ರಿಯೆ ನೀಡಿರುವಂತೆ ದೆಹಲಿ ಹೈಕೋರ್ಟ್‌ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಗೆ ನೋಟಿಸ್‌ ಜಾರಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್.‌2026ರಲ್ಲಿ ನಡೆಯಲಿದೆ.

ಪ್ರಕರಣ ಸಂಬಂಧ ಇಡಿ ಸಲ್ಲಿಸಿದ್ದ ಚಾರ್ಜ್‌ಶೀಟ್‌ ಅನ್ನು ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

- Advertisement -

Latest News

error: Content is protected !!