Friday, June 5, 2026
Homeತಾಜಾ ಸುದ್ದಿಬೆಂಗಳೂರು-ಕರಾವಳಿ ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಿ; ರೈಲ್ವೇ ಸಚಿವರಿಗೆ ಕೇಂದ್ರ ಸಚಿವ ಹೆಚ್.ಡಿ....

ಬೆಂಗಳೂರು-ಕರಾವಳಿ ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಿ; ರೈಲ್ವೇ ಸಚಿವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರ

- Advertisement -
- Advertisement -

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ, ರೈಲ್ವೇ ಇಲಾಖೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ರೈಲ್ವೇ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ.

ಈ ಭಾಗದಲ್ಲಿ ವಂದೇ ಭಾರತ್ ರೈಲು ಸಂಚಾರಕ್ಕೆ ಅವಕಾಶ ನೀಡುವುದರಿಂದ ಕರಾವಳಿ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ,‌ ಅಭಿವೃದ್ಧಿಗೂ ಹೆಚ್ಚು ಪೂರಕವಾಗಿರುತ್ತದೆ ಎಂದು ರೈಲ್ವೇ ಸಚಿವರ ಗಮನ ಸೆಳೆದಿರುವ ಕುಮಾರಸ್ವಾಮಿ,ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವೇಗದ ರೈಲು ಸೇವೆ ಆರಂಭಿಸಲು ಇದೀಗ ಸರ್ವ ರೀತಿಯ ಅನುಕೂಲಕರ ಮೂಲಸೌಲಭ್ಯಗಳಿವೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮನವಿಯನ್ನು ಪರಿಗಣಿಸಿ ವಂದೇ ಭಾರತ್‌ ರೈಲು ಸೇವೆ ಆರಂಭಿಸುವ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನೈರುತ್ಯ ರೈಲ್ವೇಯ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ರೈಲ್ವೇ ಸಚಿವರಿಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!