- Advertisement -
![]()
- Advertisement -
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳು ಮತ್ತು ಗಾಯಗೊಂಡವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಘೋಷಿಸಿವೆ.
ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದು, ಅಪಘಾತದ ಕುರಿತು ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.
ಇನ್ನು ಮೃತಪಟ್ಟವರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಹಿರಿಯೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಹತ್ತು ಬಸ್ ಪ್ರಯಾಣಿಕರು ಸಜೀವ ದಹನವಾಗಿದ್ದರು.
- Advertisement -


