- Advertisement -
![]()
- Advertisement -
ಬೆಂಗಳೂರು: ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ಒಂದು ಕೋಟಿ ರೂಪಾಯಿ ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ರೂಪಾಯಿ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ಅರಣ್ಯ ಇಲಾಖೆ ತಿಳಿವಳಿಕೆ ಒಪ್ಪಂದ ಮಾಡಿಕೊಂಡಿದೆ.
ಅರಣ್ಯ ಇಲಾಖೆಯ ಎಲ್ಲಾ ಖಾಯಂ ಉದ್ಯೋಗಿಗಳಿಗೆ, ಅವರ ವೇತನ ಮತ್ತು ಶ್ರೇಣಿಯ ಹೊರತಾಗಿ ಎಲ್ಲರಿಗೂ ಒಂದು ಕೋಟಿ ರೂಪಾಯಿಗಳ ಅಪಘಾತ ಮರಣ ವಿಮೆಯನ್ನು ಬ್ಯಾಂಕ್ ನೀಡುತ್ತದೆ. ಒಂದೊಮ್ಮೆ ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಹೆಚ್ಚುವರಿಯಾಗಿ 25 ಲಕ್ಷ ರೂಪಾಯಿಗಳನ್ನು ಬ್ಯಾಂಕ್ ಪಾವತಿಸಲಿದೆ.
ಬ್ಯಾಂಕ್ ಆಫ್ ಬರೋಡಾದಲ್ಲಿ ಅರಣ್ಯ ಇಲಾಖೆಯ ನೌಕರರು ಪಿಂಚಣಿ ಖಾತೆಯನ್ನು ಮುಂದುವರಿಸಿದರೆ ಈ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯ ಸೌಲಭ್ಯ 70 ವರ್ಷ ವಯಸ್ಸಿನವರೆಗೆ ಮುಂದುವರಿಯುತ್ತದೆ. ಇದಲ್ಲದೇ ಖಾಯಂ ಉದ್ಯೋಗಿಗಳಿಗೆ ಹತ್ತು ಲಕ್ಷ ರೂಪಾಯಿಗಳ ಜೀವ ವಿಮಾ ರಕ್ಷಣೆಯನ್ನು ಸಹ ಬ್ಯಾಂಕ್ ಒದಗಿಸುತ್ತದೆ.
- Advertisement -


