- Advertisement -
![]()
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಒಕ್ಕೂಟ ಮಂಗಳೂರು ಇದರ ಕ್ರೀಡಾಕೂಟವು ಶನಿವಾರ ಬೆಳಗ್ಗೆ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿದ್ದು, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಕಾರ್ಯ ನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ದೇವರಾಜ್ ರೈ, ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಳ್ಯೊಟ್ಟು, ಒಕ್ಕೂಟದ ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ, ಜೋಯಿಲ್ ಪ್ರಕಾಶ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
ಒಕ್ಕೂಟದ ಅಧ್ಯಕ್ಷ ಕರುಣಾಕರ ಅವರು ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಬ್ಯಾಂಕ್ ಅಧ್ಯಕ್ಷರನ್ನು ನೌಕರರ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ಗೆದ್ದ ಒಕ್ಕೂಟದ ಸದಸ್ಯರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.
- Advertisement -


