Wednesday, June 24, 2026
Homeಕರಾವಳಿಮಂಗಳೂರುಮಂಗಳೂರು : ಬೈಕ್ ನಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ ಪ್ರಕರಣ:...

ಮಂಗಳೂರು : ಬೈಕ್ ನಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ ಪ್ರಕರಣ: ಆರೋಪಿಗಳಿಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು : ಬಜ್ಪೆ ಬಳಿ ಬೈಕ್ ನಲ್ಲಿ ಬೈಕ್ ನಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಎಡಪದವಿನ ಸುಮಿತ್ ಭಂಡಾರಿ (21), ರಜತ್ ನಾಯ್ಕ್‌ (30) ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

 ‘ಬೈಕನ್ನು ಟಾಟಾ ಸುಮೊ ವಾಹನದಲ್ಲಿ ಹಿಂಬಾಲಿಸಿದ್ದ ಆರೋಪಿಗಳು ನಾರ್ಲಪದವು ಬಳಿ ವಾಹನವನ್ನು ರಸ್ತೆಗೆ ಅಡ್ಡ ನಿಲ್ಲಿಸಿ, ತಂದೆ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ನನ್ನ ಬಟ್ಟೆಯನ್ನು ಜಗ್ಗಿ ಕಿರುಕುಳ ನೀಡಿದ್ದಾರೆ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ. ಅದರ ಆಧಾರದಲ್ಲಿ ಆರೋಪಿಗಳಾದ ಸುಮಿತ್ ಭಂಡಾರಿ ಹಾಗೂ ರಜತ್ ನಾಯ್ಕ್ ವಿರುದ್ಧ ಪೊಕ್ಸೊ ಕಾಯ್ದೆಯ ಸೆಕ್ಷನ್ 12 (ಲೈಂಗಿಕ ಕಿರುಕುಳ), ಭಾರತೀಯ ನ್ಯಾಯಾಂಗ ಸಂಹಿತೆಯ ಸೆಕ್ಷನ್ 126 (2) (ತಡೆದು ನಿಲ್ಲಿಸಿದ್ದು), ಸೆಕ್ಷನ್‌ 115 (2) (ಹಲ್ಲೆ ನಡೆಸಿದ್ದು), ಸೆಕ್ಷನ್ 74 (ಬಾಲಕಿ ಮೇಲೆ ಹಲ್ಲೆ, ಮಾನಭಂಗ ಯತ್ನ), ಸೆಕ್ಷನ್ 75 (1) (ಲೈಂಗಿಕ ಕಿರುಕುಳ), ಸೆಕ್ಷನ್ 351 (ಕ್ರಿಮಿನಲ್ ಬೆದರಿಕೆ) ಹಾಗೂ ಸೆಕ್ಷನ್ 352 (ಶಾಂತಿ ಭಂಗ) ಅಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಬ್ದುಲ್ ಸತ್ತಾರ್‌ ಬೈಕಿನಲ್ಲಿ 35 ಪೊಟ್ಟಣಗಳಲ್ಲಿ ತುಂಬಿದ್ದ 19 ಕೆ.ಜಿ. ಗೋಮಾಂಸ ಪತ್ತೆಯಾಗಿದೆ. ಅದಕ್ಕೆ ಸಂಬಂಧಪಟ್ಟಂತೆ ಆರೋಪಿ ಯಾವುದೇ ಬಿಲ್‌ ಅಥವಾ ದಾಖಲೆಗಳನ್ನು ಒದಗಿಸಿಲ್ಲ. ಅದನ್ನು ಆತ ಎಲ್ಲಿಂದ ತಂದಿದ್ದ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!