Thursday, June 4, 2026
Homeತಾಜಾ ಸುದ್ದಿಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

- Advertisement -
- Advertisement -

ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಜನಾರ್ಧನ ರೆಡ್ಡಿಯವರು ಬಚಾವ್ ಆಗಿದ್ದರು.

ನೆರೆಯ ಆಂಧ್ರಪ್ರದೇಶದ ಅನುಮತಿ ಪಡೆದುಕೊಂಡು ಕರ್ನಾಟಕದ ಗಡಿ ಒತ್ತುವರಿ ಮಾಡಿದ ಪ್ರಕರಣದಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಜನಾರ್ಧನ ರೆಡ್ಡಿ ಕಾನೂನು ಬಾಹಿರವಾಗಿ ಗಡಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಿಲುಕಿದ್ದಾರೆ. ಒಂದು ವೇಳೆ ಸುಪ್ರೀಂಕೋರ್ಟ್ ಈ ವರದಿಯನ್ನು ಅಂಗೀಕರಿಸಿದರೆ ರೆಡ್ಡಿಗೆ ಮತ್ತೆ ಕಾನೂನಿನ ಕುಣಿಕೆ ಬಿಗಿಯಾಗಲಿದೆ.

ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಹಿಂದೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಅತಿಕ್ರಮಣ ನಡೆಸಿ ಒತ್ತುವರಿ ಮಾಡಿಕೊಂಡಿದೆ ಎಂದು ವರದಿಯನ್ನು ನೀಡಿದೆ. ಈ ವರದಿಯನ್ನು ನ್ಯಾಯಾಲಯ ಅಂಗೀಕರಿಸಿ ವಿಚಾರಣೆಗೆ ಒಳಪಡಿಸಿದರೆ ರೆಡ್ಡಿಗೆ ಪುನಃ ಕಾನೂನಿನ ಸಂಕಷ್ಟ ಎದುರಾಗಲಿದೆ.

- Advertisement -

Latest News

error: Content is protected !!