Saturday, June 13, 2026
Homeಮನರಂಜನೆನಟ ಶಿವರಾಜ್ ಕುಮಾರ್ ಅವರಿಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದ ನಟಿ ರಾಧಿಕಾ ಕುಮಾರಸ್ವಾಮಿ..

ನಟ ಶಿವರಾಜ್ ಕುಮಾರ್ ಅವರಿಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದ ನಟಿ ರಾಧಿಕಾ ಕುಮಾರಸ್ವಾಮಿ..

- Advertisement -
- Advertisement -

ಬೆಂಗಳೂರು : ಇವತ್ತು ಸಹೋದರತ್ವದ ಸಂಕೇತವಾದ ರಕ್ಷಾ ಬಂಧನ ಹಬ್ಬವನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಅನೇಕ ತಾರೆಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿರುವ ಸಂಭ್ರಮದ ಕ್ಷಣಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ನಟಿ ರಾಧಿಕಾ ಕುಮಾರಸ್ವಾಮಿ ಅವರು ಕೂಡ ಫೋಟೋ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ನಟ ಶಿವರಾಜ್ ಕುಮಾರ್ ಅವರಿಗೆ ರಾಖಿ ಕಟ್ಟಿರುವ ಹಳೇ ಫೋಟೋವೊಂದನ್ನು ಅವರು ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದಾರೆ.

ಇನ್ನು ಕೆಲವು ವರ್ಷಗಳ ಹಿಂದೆ ರಾಖಿ ಹಬ್ಬಕ್ಕೆ ರಾಧಿಕಾ ಅವರು ಶಿವಣ್ಣನಿಗೆ ಚಿನ್ನದ ರಾಖಿ ಕಟ್ಟಿದ್ದರು. ಇದೀಗ ಈ ವರ್ಷ ಹಳೇ ಫೋಟೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಶಿವರಾಜ್ ಕುಮಾರ್ ಅವರಿಗೆ ರಕ್ಷಾ ಬಂಧನದ ಶುಭಾಶಯಗಳನ್ನು ತಿಳಿಸಿದ್ದಾರೆ.

- Advertisement -

Latest News

error: Content is protected !!