Saturday, June 6, 2026
HomeWorldಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ

- Advertisement -
- Advertisement -

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿದ್ದ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ನಾಯಕಿ ಬೇಗಂ ಖಲೇದಾ ಜಿಯಾ ಅವರು ಮಂಗಳವಾರ ನಿಧನರಾಗಿದ್ದಾರೆ.

ಖಲೇದಾ ಜಿಯಾ ಅವರು ಲಿವರ್ ಸಿರೋಸಿಸ್, ಸಂಧಿವಾತ, ಮಧುಮೇಹ ಹಾಗೂ ಹೃದಯಕ್ಕೆ ಸಂಬಂಧಿಸಿದ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, ವಯೋಸಹಜ ಕಾಯಿಲೆಗಳ ತೀವ್ರತೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಖಲೇದಾ ಜಿಯಾ ಅವರ ನಿಧನವನ್ನು ಖಚಿತಪಡಿಸಿದೆ.ಬಿಎನ್’ಪಿ ಅಧ್ಯಕ್ಷೆ ಹಾಗೂ ಮಾಜಿ ಪ್ರಧಾನಮಂತ್ರಿ ಖಲೇದಾ ಜಿಯಾ ಇಂದು ಬೆಳಗ್ಗೆ ನಿಧನರಾದರು. ಅವರ ಆತ್ಮಕ್ಕೆ ಶಾಂತಿ ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!