Saturday, June 6, 2026
Homeಕರಾವಳಿಮಂಗಳೂರುವಿಟ್ಲ; ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ: ಭಾರೀ ನಷ್ಟ

ವಿಟ್ಲ; ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ: ಭಾರೀ ನಷ್ಟ

- Advertisement -
- Advertisement -

ವಿಟ್ಲ; ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿ ಭಾರೀ ನಷ್ಟ ಉಂಟಾಗಿದೆ.

ವಿಟ್ಲ ಪೇಟೆಯಲ್ಲಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಅದು ಇಡೀ ಅಂಗಡಿಗೆ  ವ್ಯಾಪಿಸಿದೆ. ಪರಿಣಾಮ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ ಬೆಂಕಿ ಸುತ್ತಮುತ್ತಲಿನ ಅಂಗಡಿಗಳಿಗೂ ಹಬ್ಬಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.


ಸಂತೋಷ್ ಕುಮಾರ್ ಕೊಡಂಗೆ ಮಾಲೀಕತ್ವದ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಿಯಂತ್ರಣಕ್ಕೆ ಬಾರದ ಸ್ಥಿತಿಗೆ ತಲುಪಿದೆ. ಬೆಂಕಿ ಅಮಿತ್ ಹೋಟೇಲ್ ಹಾಗೂ ಸ್ಟಾರ್ ವೈನ್ಸ್ ವರೆಗೂ ಹಬ್ಬಿದ್ದು, ಇದರ ನಡುವೆ ಇದ್ದ ಎಸ್. ಬಿ. ಟೈಲರಿಂಗ್ ಶಾಪ್, ಪಡೀಲ್ ಫಾಸ್ಟ್ ಫುಡ್ ಸಹಿತ ಸಣ್ಣ ಅಂಗಡಿಗಳೂ ಬೆಂಕಿಗೆ ಆಹುತಿಯಾಗಿದೆ. ಬಂಟ್ವಾಳದಿಂದ ಅಗ್ನಿಶಾಮಕ ವಾಹನ ಬಂದಿದ್ದು, ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದೆ. ಈ ಘಟನೆಯ ಪರಿಣಾಮವಾಗಿ ಭಾರೀ ನಷ್ಟ ಸಂಭವಿಸಿದೆ.

- Advertisement -

Latest News

error: Content is protected !!