Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ವಹಿಸಲು ಮೀನಾಮೇಷ; ಲಾಯಿಲ ಗ್ರಾ.ಪಂ. ಪಿಡಿಓ ಶ್ರೀನಿವಾಸ್...

ಬೆಳ್ತಂಗಡಿ : ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ವಹಿಸಲು ಮೀನಾಮೇಷ; ಲಾಯಿಲ ಗ್ರಾ.ಪಂ. ಪಿಡಿಓ ಶ್ರೀನಿವಾಸ್ ರನ್ನು ಎತ್ತಂಗಡಿ ಮಾಡಿದ ಇಓ

- Advertisement -
- Advertisement -

ಬೆಳ್ತಂಗಡಿ : ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ವಹಿಸಲು ಮೀನಾಮೇಷ ಎಣಿಸುತ್ತಿದ್ದ ಲಾಯಿಲ ಗ್ರಾಮ ಪಂಚಾಯತ್ ಪಿಡಿಓ ಶ್ರೀನಿವಾಸ್ ರನ್ನು ಎತ್ತಂಗಡಿ ಮಾಡಿ ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಡಿ.30 ರಂದು ಆದೇಶ ಹೊರಡಿಸಿದ್ದಾರೆ.

ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಸಮಯಗಳಿಂದ ಅಕ್ರಮ ಕಟ್ಟಡಗಳು ಗ್ರಾಮ ಪಂಚಾಯತ್ ನ ಅನುಮತಿ ಇಲ್ಲದೆ ಕಾರ್ಯಾಚರಿಸುತ್ತಿವೆ. ಈ ಬಗ್ಗೆ  ಸಾರ್ವಜನಿಕರು ದೂರು ನೀಡಿದ್ರೂ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ (ಪಿಡಿಓ) ಶ್ರೀನಿವಾಸ್ ಕಾನೂನು ಕ್ರಮ ಕೈಗೊಳ್ಳದೆ ಕೈಕಟ್ಟಿ ಕುಳಿತಿದ್ದರು. ಹೀಗಾಗಿ ಗ್ರಾಮಸ್ಥರು ಆಕ್ರೋಶ ಹೊರ ಹಾಕುತ್ತಲೇ ಇದ್ರು. ಇದರ ಬೆನ್ನಲ್ಲೇ ಪಿಡಿಓ ಶ್ರೀನಿವಾಸ್ ರನ್ನು ಎತ್ತಂಗಡಿ ಮಾಡಿ ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಡಿ.30 ರಂದು ಆದೇಶ ಹೊರಡಿಸಿದ್ದಾರೆ.

ಇನ್ನು ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಡಿ.26 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಜನ ಸ್ಪಂದನಾ ಕಾರ್ಯದಲ್ಲಿ ಸಾರ್ವಜನಿಕರು ಮಾಡಿದ ಅಕ್ರಮ ಕಟ್ಟಡಗಳ ಬಗ್ಗೆ ಸಾಲು ಸಾಲು ಆರೋಪಗಳು ಕೇಳಿ ಬಂದಿದ್ದವು. ಇನ್ನು ಎತ್ತಂಗಡಿ ಮಾಡಿದ ಆದೇಶದಲ್ಲಿ ಕೂಡ ಜನಸ್ಪಂದನ ಸಭೆಯಲ್ಲಿ ಉಂಟಾದ ಚರ್ಚೆ ಬಗ್ಗೆ ಉಲ್ಲೇಖಿಸಲಾಗಿದೆ.

ಅಂದ್ಹಾಗೆ ಮಡಂತ್ಯಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿರುವ ಶ್ರೀನಿವಾಸ್ ಡಿ.ಪಿ ಅವರನ್ನು ಲಾಯಿಲ ಗ್ರಾಮ ಪಂಚಾಯತ್  ಗೆ ಪ್ರಭಾರ ಪಿಡಿಓ ಆಗಿ ನೇಮಕ ಮಾಡಲಾಗಿತ್ತು. ಇದೀಗ ಅವರನ್ನು ಎತ್ತಂಗಡಿ ಮಾಡಲಾಗಿದ್ದು ಮಡಂತ್ಯಾರ್ ಗ್ರಾಮ ಪಂಚಾಯತ್ ಗೆ ಮಾತ್ರ ಕರ್ತವ್ಯಕ್ಕೆ ಮಾತ್ರ ನೇಮಕ ಮಾಡಲಾಗಿದೆ. ಕೊಯ್ಯೂರು ಗ್ರಾಮ ಪಂಚಾಯತ್ ನಲ್ಲಿ ಎ- ಗ್ರೇಡ್ ಕಾರ್ಯದರ್ಶಿಯಾಗಿದ್ದ ತಾರಾನಾಥ್ ಅವರನ್ನು ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಪ್ರಭಾರ ಹುದ್ದೆಗೆ ನೇಮಕ ಮಾಡಲಾಗಿದೆ. ಕೊಯ್ಯೂರು ಗ್ರಾಮ ಪಂಚಾಯತ್ ಗೆ ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ಅವರನ್ನು ನೇಮಕ ಮಾಡಿ ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಅವರು ಆದೇಶಿಸಿದ್ದಾರೆ.

- Advertisement -

Latest News

error: Content is protected !!