Saturday, August 29, 2026
Homeಕರಾವಳಿಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಲಿಗೆ ಯತ್ನ; ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಲಿಗೆ ಯತ್ನ; ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ

- Advertisement -
- Advertisement -

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ಅಂಗಾರಗುಡ್ಡೆಯ ನಿವಾಸಿ ಅಬೂಬಕ್ಕರ್ ಎಂಬುವವರನ್ನು ಗುರಿಯಾಗಿಸಿಕೊಂಡು ಸುಲಿಗೆಗೆ ಯತ್ನಿಸಿದ ಘಟನೆ ನಡೆದಿದೆ.

ಮೂವರು ಜೋಡಿ ಎಮ್ಮೆ ಹಾಗೂ ಐದು ಹಸುಗಳನ್ನು ಹೊಂದಿದ್ದ ಅಬೂಬಕ್ಕರ್ ಇತ್ತೀಚೆಗಷ್ಟೇ ಕಂಬಳ ಕೂಟದಲ್ಲಿ ಬಹುಮಾನವನ್ನ ಗೆದ್ದಿದ್ದರು.

ಮೂವರು ಆರೋಪಿಗಳು ಪಕ್ಕದ ಗ್ರಾಮದಿಂದ ಬಂದಿದ್ದು ಹಣ ಸುಲಿಗೆ ಸಂದರ್ಭದಲ್ಲಿ ಅಬೂಬಕ್ಕರ್ ಅವರ ತಂದೆ ಶಂಶುದ್ದೀನ್ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಅಬೂಬಕ್ಕರ್ ಅವರು ಮಧ್ಯಪ್ರವೇಶಿಸಿ ತಂದೆಯನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರು ಅಬೂಬಕ್ಕರ್ ಕುಟುಂಬಕ್ಕೆ ಬೆಂಬಲವಾಗಿ ನಿಂತಿದ್ದಾರೆ.

ಇನ್ನು ಈ ಘಟನೆಯ ಬಗ್ಗೆ ದೂರು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊರ್ವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದು, ಆರೋಪಿಗಳ ಪೈಕಿಯೋರ್ವ ಸಂತ್ರಸ್ತನೆಂದು ಬಿಂಬಿಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದ ಎಂದು ಹೇಳಲಾಗಿದೆ.

ಪೊಲೀಸ್ ಅಧಿಕಾರಿಗಳು ಬಂಧಿತರ ಪೈಕಿ ಇಬ್ಬರು ಆರೋಪಿಗಳ ಮೇಲೆ ಈಗಾಗಲೇ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ. ಲಭ್ಯವಿರುವ ಎಲ್ಲಾ ವೀಡಿಯೋ ತುಣುಕುಗಳನ್ನು ಪರಿಶೀಲಿಸಿದ ನಂತರ ಹೆಚ್ಚಿನ ಮಾಹಿತಿ ಬೆಳಕಿಗೆ ಬರಲಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!