Sunday, June 7, 2026
HomeWorldನದಿ ತಟದಲ್ಲಿ 200ಕ್ಕೂ ಹೆಚ್ಚು ಗಿಳಿಗಳು ನಿಗೂಢ ಸಾವು

ನದಿ ತಟದಲ್ಲಿ 200ಕ್ಕೂ ಹೆಚ್ಚು ಗಿಳಿಗಳು ನಿಗೂಢ ಸಾವು

- Advertisement -
- Advertisement -

ಮಧ್ಯಪ್ರದೇಶ: 200ಕ್ಕೂ ಹೆಚ್ಚು ಗಿಳಿಗಳು ನಿಗೂಢವಾಗಿ ಇಲ್ಲಿಯ ನರ್ಮದಾ ನದಿಯ ತೀರದಲ್ಲಿ ಸಾವನ್ನಪ್ಪಿದ್ದು, ಈ ಘಟನೆಯು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಈ ಘಟನೆಯು ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪದಲ್ಲಿ ಬೆಳಕಿಗೆ ಬಂದಿದ್ದು, ಇಲ್ಲಿ ಕಳೆದ ನಾಲ್ಕು ದಿನಗಳಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದೆ.

ಈ ಬಗ್ಗೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್, ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದಾರೆ.

ಇನ್ನು ಈ ಮೊದಲು ಅರಣ್ಯ ಇಲಾಖೆಯು ಹಕ್ಕಿಗಳಿಗೆ ಸೇತುವೆಯ ಸುತ್ತಮುತ್ತ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿತ್ತು.

ಸದ್ಯಕ್ಕೆ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ.

- Advertisement -

Latest News

error: Content is protected !!