ರಾಷ್ಟ್ರೀಯ ತನಿಖಾ ದಳವು(ಎನ್ಐಎ) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಕೈದಿ ಟಿ.ನಸೀರ್‌ಗೆ ನೆರವು ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನ ಸಲ್ಲಿಸಿದೆ.
ಈ ಪ್ರಕರಣದಲ್ಲಿ ಎರಡನೇ ದೋಷಾರೋಪ ಪಟ್ಟಿ ಇದಾಗಿದ್ದು, ಆರೋಪಿ ಜುನೈದ್‌ನ ತಾಯಿ ಅನೀಸ್ ಫಾತಿಮಾ, ಎಎಸ್‌ಐ ಚಾಂದ್ಪಾಷಾ ಎ. ಹಾಗೂ ಕಾರಾಗೃಹದ ವೈದ್ಯ ಡಾ.ನಾಗರಾಜ್ ಎಸ್. ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಇನ್ನು ಐಪಿಸಿ, ಯುಎ(ಪಿ) ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ, ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಕರ್ನಾಟಕ ಕಾರಾಗೃಹ ಕಾಯ್ದೆಯ ವಿವಿಧ ವಿಭಾಗಗಳಡಿಯಲ್ಲಿ ಆರೋಪಿಗಳು ಎಂದು ದೋಷಾರೋಪ ಪಟ್ಟಿ ಉಲ್ಲೇಖಿಸಿರುವುದಾಗಿ ತಿಳಿದು ಬಂದಿದೆ.
ಈ ಹಿಂದೆಯೂ ಎನ್ಐಎ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪರಾರಿಯಾಗಿದ್ದ ಆರೋಪಿ ಜುನೈದ್ ಸಹಿತ 9 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು. ಇದೀಗ ಹೆಚ್ಚುವರಿಯಾಗಿ ಎನ್ಐಎ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.


