Saturday, June 6, 2026
Homeಆರಾಧನಾಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥರಿಂದ ಜ.4ರಂದು ಮಂಗಳೂರಿಗೆ ಪುರ ಪ್ರವೇಶ

ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥರಿಂದ ಜ.4ರಂದು ಮಂಗಳೂರಿಗೆ ಪುರ ಪ್ರವೇಶ

- Advertisement -
- Advertisement -

ಮಂಗಳೂರು: ಉಡುಪಿಯ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥರು ಜ.4ರಂದು ಸಂಜೆ 4 ಗಂಟೆಗೆ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ರಾಜಾಂಗಣದಲ್ಲಿ ಮಂಗಳೂರಿಗೆ ಪುರ ಪ್ರವೇಶ ಮಾಡಲಿದ್ದಾರೆ.

ಉಡುಪಿಯ ಶೀರೂರು ಮಠಾಧೀಶರು ಪ್ರಥಮ ಬಾರಿಗೆ ಪರ್ಯಾಯ ಸರ್ವಜ್ಞ ಪೀಠವನ್ನು ಅಲಂಕರಿಸಿದ್ದು, ಅವರು ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿದ್ದಾರೆ. ವಈ ನಿಟ್ಟಿನಲ್ಲಿ ಜ.4ರಂದು ಸಂಜೆ 4 ಗಂಟೆಗೆ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ರಾಜಾಂಗಣದಲ್ಲಿ ಮಂಗಳೂರಿಗೆ ಪುರ ಪ್ರವೇಶ ಮಾಡಲಿದ್ದು, ಅವರನ್ನು ಪರ್ಯಾಯದ ಮಂಗಳೂರು ಸ್ವಾಗತ ಸಮಿತಿಯ ವತಿಯಿಂದ ಹಾಗೂ ಭಕ್ತ ಸಮೂಹದಿಂದ ಉರ್ವಸ್ಟೋರ್ ಶ್ರೀ ಮಹಾ ಗಣಪತಿ ದೇವಸ್ಥಾನದ ಆವರಣದಲ್ಲಿ ಶೀರೂರು ಶ್ರೀ ಅವರನ್ನು ಪೂರ್ಣಕುಂಭ ದೊಂದಿಗೆ ಸ್ವಾಗತಿಸಲಾಗುವುದು.

ಜ. 4ರಿಂದ 8ತನಕ ಶೀರೂರು ಶ್ರೀ ಮಂಗಳೂರಿನ ಭಕ್ತಾದಿಗಳ ಮನೆಗೆ ಭೇಟಿ ಮತ್ತು ಹಲವಾರು ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪರ್ಯಾಯ ರಾಯಸವನ್ನು ಭಕ್ತಾದಿಗಳಿಗೆ ನೀಡಲಿದ್ದಾರೆ ಎಂದು ಉಡುಪಿ ಶೀರೂರು ಪರ್ಯಾಯ -2026 ಸ್ವಾಗತ ಸಮಿತಿಯ ಮಂಗಳೂರು ಗೌರವಾಧ್ಯಕ್ಷ ಡಾ.ಎಂ.ಬಿ. ಪುರಾಣಿಕ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿ ಕಾರ್ಯಾಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಸಮಿತಿ ಪ್ರಧಾನ ಕಾರ್ಯದರ್ಶಿ ಸುಧಾಕರ ರಾವ್ ಪೇಜಾವರ, ಪ್ರಧಾನ ಸಂಚಾಲಕ ಗುರುಪ್ರಸಾದ್ ಕಡಂಬಾರ್, ಕೋಶಾಧಿಕಾರಿ ಬಿ. ಸುಬ್ರಹ್ಮಣ್ಯ ರಾವ್, ಉಪಾಧ್ಯಕ್ಷ ಎಂ. ರವೀಂದ್ರ ಶೇಟ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!