Thursday, June 4, 2026
Homeತಾಜಾ ಸುದ್ದಿವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅಶ್ಲೀಲ ಕಮೆಂಟ್ ಹಾಕಿದ ಪ್ರಕರಣ: ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು

ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅಶ್ಲೀಲ ಕಮೆಂಟ್ ಹಾಕಿದ ಪ್ರಕರಣ: ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು

- Advertisement -
- Advertisement -

ಬೆಂಗಳೂರು; ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅಶ್ಲೀಲ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಚಂದ್ರು ಮತ್ತು ನಿಖಿಲ್ ಬಂಧಿತರು.

2025ರ ಡಿಸೆಂಬರ್‌ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಒಂದು ಹೇಳಿಕೆ ನೀಡಿದ್ದರು. ಆ ಹೇಳಿಕೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಅಶ್ಲೀಲ ಹಾಗೂ ಅವಾಚ್ಯ ಕಾಮೆಂಟ್‌ಗಳು ಹೆಚ್ಚಾಗಿ ಹರಡಿದ್ದವು. ಇದರಿಂದ ಕೋಪಗೊಂಡ ವಿಜಯಲಕ್ಷ್ಮಿ ಅವರು, 15 ಇನ್‌ಸ್ಟಾಗ್ರಾಂ ಖಾತೆಗಳು ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಾಮೆಂಟ್‌ಗಳ ವಿರುದ್ಧ ಫೋಟೋ ಸಾಕ್ಷ್ಯಗಳೊಂದಿಗೆ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ತನಿಖೆ ನಡೆಸಿದ ಸೈಬರ್ ಪೊಲೀಸರು, ಆ 15 ಐಡಿಗಳಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರ ಪತ್ತೆಗಾಗಿ ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!