Saturday, June 6, 2026
Homeಕರಾವಳಿಮಂಗಳೂರುಉಪ್ಪಿನಂಗಡಿ; ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಜಂಟಿ ವ್ಯವಸ್ಥಾಪಕ ಎಟಿಎಂ ಹಣ ಹಾಗೂ...

ಉಪ್ಪಿನಂಗಡಿ; ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಜಂಟಿ ವ್ಯವಸ್ಥಾಪಕ ಎಟಿಎಂ ಹಣ ಹಾಗೂ ಲಾಕರ್ ಒಂದರಲ್ಲಿದ್ದ ಚಿನ್ನದೊಂದಿಗೆ ಎಸ್ಕೇಪ್

- Advertisement -
- Advertisement -

ಉಪ್ಪಿನಂಗಡಿ; ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಜಂಟಿ ವ್ಯವಸ್ಥಾಪಕ ಎಟಿಎಂ ಹಣ ಹಾಗೂ ಲಾಕರ್ ಒಂದರಲ್ಲಿದ್ದ ಚಿನ್ನದೊಂದಿಗೆ ಎಸ್ಕೇಪ್ ಆದ ಘಟನೆ ನಡೆದಿದೆ. ಸುಬ್ರಹ್ಮಣ್ಯಂ (30) ಎಸ್ಕೇಪ್ ಆದ ಜಂಟಿ ವ್ಯವಸ್ಥಾಪಕ.

ಸುಬ್ರಮಣ್ಯ ಬ್ಯಾಂಕ್ ಆಫ್ ಬರೋಡಾ ಪೆರ್ನೆ ಶಾಖೆಯ ಜಂಟಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಎಟಿಎಂ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿದ್ದರು. ಇವರು ದಿನಾಂಕ 06-02-2024 ರಿಂದ 16-12-2025 ರವರೆಗೆ ಎಟಿಎಂಗೆ ನಿಗದಿತ ನಗದು ಜಮಾ ಮಾಡದೇ ಕಡಿಮೆ ಹಣ ಜಮಾ ಮಾಡಿ ರೂ.70,86,000/- ಹಣವನ್ನು ದುರುಪಯೋಗಪಡಿಸಿಕೊಂಡಿದ್ದು, ದಿನಾಂಕ 19-12-2025 ರಂದು ಸೇಫ್ ಲಾಕರ್ ಪರಿಶೀಲನೆ ವೇಳೆ ರೂ.55,000/- ಮೌಲ್ಯದ 4.400 ಗ್ರಾಂ ಚಿನ್ನ ವಂಚಿಸಿರುವುದು ಬೆಳಕಿಗೆ ಬಂದಿದೆ. ಹಣದ ದುರುಪಯೋಗ ಪತ್ತೆಯಾಗುತ್ತಿದ್ದಂತೆ ದಿನಾಂಕ 17-12-2025 ರಂದು ಯಾರಿಗೂ ತಿಳಿಸದೇ ತೆರಳಿರುತ್ತಾರೆ. ಒಟ್ಟು ವಂಚನೆಯ ಮೌಲ್ಯ ರೂ.71,41,000/- ಆಗಿರುತ್ತದೆ ಎಂದು C.V.S. ಚಂದ್ರಶೇಖರ್ (50), ಶ್ರೀಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ವ್ಯವಸ್ಥಾಪಕರು, ಜೆಪ್ಪು ಮಂಗಳೂರು ರವರು ದಿನಾಂಕ 23-12-2025 ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025, ಕಲಂ 314, 316(5), 318(2) BNS-2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!