- Advertisement -
![]()
- Advertisement -
ಬೆಳ್ತಂಗಡಿ : ಸರಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ವಂಚನೆ ಮಾಡಿ ಸರಕಾರದ ನಿಯಮಾವಳಿಗಳನ್ನು ಮೀರಿ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ನಿರ್ಮಾಣ ಮಾಡಿಕೊಂಡು ಹಾಗೂ ಕೊಳಚೆ ನೀರು ಸಂಸ್ಕರಣ ಘಟಕ(STP) ನಿರ್ಮಾಣ ಮಾಡದೆ ತ್ಯಾಜ್ಯ ನೀರನ್ನು ಹಾರಿಯುವ ನೀರುಗಳಿಗೆ ಬಿಟ್ಟು ಕಾರ್ಯಚರಿಸುತ್ತಿರುವ ಎರಡು ವಸತಿ ಖಾಸಗಿ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಲು ಇಲಾಖೆಗಳಿಗೆ ದೂರು ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿರುವ ವಿದ್ವತ್ ಪಿಯು ಕಾಲೇಜ್ ಮತ್ತು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿ ಇರುವ ಅಭ್ಯಾಸ್ ಪ್ರೀ ಯೂನಿವರ್ಸಿಟಿ ಕಾಲೇಜ್ ವಿರುದ್ಧ ಕಾನೂನು ಸೂಕ್ತ ಕ್ರಮ ಕೈಗೊಳ್ಳಲು ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿ,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸ್ಥಳೀಯ ವ್ಯಕ್ತಿ ಜ.3 ರಂದು ದೂರು ನೀಡಿದ್ದಾರೆ.
- Advertisement -


