Saturday, June 6, 2026
Homeಕರಾವಳಿಮಂಗಳೂರುಮಂಗಳೂರು: ಸ್ನೇಹಿತೆಯೇ ಮುಂದೆಯೇ ನದಿಗೆ ಹಾರಿ ಯುವತಿ ಆತ್ಮಹತ್ಯೆ

ಮಂಗಳೂರು: ಸ್ನೇಹಿತೆಯೇ ಮುಂದೆಯೇ ನದಿಗೆ ಹಾರಿ ಯುವತಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ಸ್ನೇಹಿತೆಯೇ ಮುಂದೆಯೇ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಪುರ ಸೇತುವೆಯಲ್ಲಿ ನಡೆದಿದೆ.ಮೂಡಬಿದಿರೆಯ ಕಡೆಪಲ್ಲ ನಿವಾಸಿ ನವ್ಯಾ(20) ಮೃತರು.


ಸ್ನೇಹಿತೆಯೊಂದಿಗೆ ಸ್ಕೂಟರ್ ನಲ್ಲಿ ಬಂದ ನವ್ಯಾ ಮಧ್ಯಾಹ್ನ ವೇಳೆಗೆ ಗುರುಪುರ ಸೇತುವೆ ಬಳಿ ತಲುಪಿದಾಗ ಸ್ಕೂಟರ್ ನಿಲ್ಲಿಸಿ ತಾನು ನದಿಗೆ ಹಾರುತ್ತೇನೆಂದು ಹೇಳಿ ಹಾರಿದ್ದಾಳೆ. ಈ ವೇಳೆ ಸ್ನೇಹಿತೆ ಕೈ ಹಿಡಿದು ಎಳೆದರೂ ಬದುಕಿಸಲು ಸಾಧ್ಯವಾಗಲಿಲ್ಲ. ವಿಷಯ ತಿಳಿದ ಕೂಡಲೇ ಪೊಲೀಸರು , ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಶವವನ್ನು ಮೇಲಕ್ಕೆತ್ತಿದ್ದಾರೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ನವ್ಯಾ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು ಆತ ಮದುವೆಯಾಗುವುದಾಗಿ ವಂಚಿಸಿದ್ದಾನೆ ಎಂದು ಹೇಳಲಾಗಿದೆ. ಆತನ ಭೇಟಿಗೂ ಮುಂದಾಗಿ ಕರೆ ಮಾಡಿದ್ದಳು, ಬಳಿಕ ಡೆತ್ ನೋಟ್ ಬರೆದಿದ್ದಾಳೆ ಎಂದು ಹೇಳಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!