Saturday, August 29, 2026
Homeಕರಾವಳಿಉಡುಪಿಉಡುಪಿ: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ಸ್ಕೂಟರ್ ಸವಾರ ಸಾವು

ಉಡುಪಿ: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ಸ್ಕೂಟರ್ ಸವಾರ ಸಾವು

- Advertisement -
- Advertisement -

ಉಡುಪಿ: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ, ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ. ಮಲ್ಪೆ ಪಡುಕೆರೆ ಮೂಲದ ಕಾಪು ಮೂಳೂರು ನಿವಾಸಿ ಕೃಷ್ಣರಾಜ ಎಸ್.ಕರ್ಕೇರ(50) ಮೃತ ದುರ್ದೈವಿ.

ಉಡುಪಿ ಕಡೆಯಿಂದ ಮಂಗಳೂರು ಕಡೆ ಬರುತ್ತಿದ್ದ ಖಾಸಗಿ ಬಸ್, ಎದುರಿನಲ್ಲಿ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಾಯಗೊಂಡ ಸವಾರ ಕೃಷ್ಣರಾಜ ಕರ್ಕೇರ ಅವರನ್ನು ಕೂಡಲೇ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೆ ಗಂಭೀರ ಸ್ಥಿತಿಯಲ್ಲಿದ್ದ ಕೃಷ್ಣರಾಜ ಕರ್ಕೇರ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!