ಬೆಳ್ತಂಗಡಿ : ಉಜಿರೆಯ ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿ ತನ್ನ ಗಡಿಪಾರು ಆದೇಶ ಪ್ರಕರಣವನ್ನು ರದ್ದು ಕೋರಿ ಎರಡನೇ ಬಾರಿಗೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 2025 ಡಿ.17 ರಂದು 10 ತಿಂಗಳ ಕಾಲ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಹೈಕೋರ್ಟ್ ಗೆ ಜ.5 ರಂದು ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.ಈ ಗಡಿಪಾರು ಆದೇಶದ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ನ್ಯಾಯಪೀಠದ ಮುಂದೆ ಇನ್ನೂ ಬರಬೇಕಾಗಿದೆ.
ಈ ಹಿಂದೆ ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿರನ್ನು ಒಂದು ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿದ್ದರು. ಆದ್ರೆ ಹೈಕೋರ್ಟ್ ಮೊರೆ ಹೋಗಿ ಆದೇಶ ರದ್ದು ಮಾಡಿ ಮತ್ತೆ ಮರುಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲು ಆದೇಶ ಮಾಡಿತ್ತು. ಮತ್ತೆ ತಿಮರೋಡಿರನ್ನು ಗಡಿಪಾರು ಆದೇಶ ಮಾಡಿದ್ದರಿಂದ ಮತ್ತೆ ಎರಡನೇ ಬಾರಿಗೆ ಹೈಕೋರ್ಟ್ ಮೊರೆ ಹೋಗಲಾಗಿದೆ.


