Wednesday, June 24, 2026
Homeತಾಜಾ ಸುದ್ದಿ5 ವರ್ಷಗಳ ಅವಧಿಗೆ ಸಿಎಂ ಆಗಿರುವ ವಿಶ್ವಾಸವಿದೆ; ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

5 ವರ್ಷಗಳ ಅವಧಿಗೆ ಸಿಎಂ ಆಗಿರುವ ವಿಶ್ವಾಸವಿದೆ; ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

- Advertisement -
- Advertisement -

ಮೈಸೂರು: ಐದು ವರ್ಷಗಳ ಅವಧಿಗೆ ತಾವು ಮುಖ್ಯಮಂತ್ರಿ ಆಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸಿಎಂ, ನನಗೆ ಹೈಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸ ಇದ್ದು, ಏನೇ ಆದರೂ ಹೈ ಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ, ಹಾಗಾಗಿ ಹೈ ಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳಿದ್ದಾರೆ.

ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ, ನನಗೆ ದೇವರಾಜ ಅರಸು ದಾಖಲೆಯ ಬಗ್ಗೆ ಅರಿವು ಇರಲಿಲ್ಲ, ಯಾವ ದಾಖಲೆಯೂ ಮುರಿಯಬೇಕು ಎಂಬುದು ನನ್ನ ಗಮನದಲ್ಲಿ ಇರಲಿಲ್ಲ, ಜನರ ಆಶೀರ್ವಾದದಿಂದ ಎಲ್ಲವೂ ನಡೆದು ಹೋಗಿದೆ ಎಂದು ಹೇಳಿದ್ದಾರೆ.

ಇವತ್ತು ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ್ದೇನೆ ಎಂದು ಇದೇ ವೇಳೆ ಹೇಳಿರುವ ಸಿಎಂ, ದೇವರಾಜ ಅರಸು ರಾಜಕಾರಣದ ಸಮಯವೇ ಬೇರೆ ಇವತ್ತಿನ ಸಮಯವೇ ಬೇರೆ, ಜನರ ಆಶೀರ್ವಾದದಿಂದ ಅಷ್ಟೇ ನಾನು ಇಲ್ಲಿಯ ತನಕ ಬಂದಿದ್ದೇನೆ, ಇಲ್ಲಿವರೆಗಿನ ರಾಜಕೀಯ ತೃಪ್ತಿ ಕೊಟ್ಟಿದೆ. ಜನರಿಗೆ ಇನ್ನಷ್ಟು ಕೆಲಸ ಮಾಡಬೇಕಿದೆ ಎಂದೂ ಹೇಳಿದ್ದಾರೆ.

- Advertisement -

Latest News

error: Content is protected !!