Wednesday, June 24, 2026
Homeಕರಾವಳಿಉಡುಪಿಕಾರ್ಕಳ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುದಾನ ನೀಡುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರಿಗೆ ಶಾಸಕ ಸುನೀಲ್ ಕುಮಾರ್ ಮನವಿ

ಕಾರ್ಕಳ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುದಾನ ನೀಡುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರಿಗೆ ಶಾಸಕ ಸುನೀಲ್ ಕುಮಾರ್ ಮನವಿ

- Advertisement -
- Advertisement -

ನವದೆಹಲಿ: ಕಾರ್ಕಳದಲ್ಲಿ ಮುಂದಿನ ವರ್ಷ ಬಾಹುಬಲಿ ಮಹಾ ಮಸ್ತಕಾಭಿಷೇಕ ನಡೆಯಲಿರುವ ಹಿನ್ನೆಲೆಯಲ್ಲಿ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ್ದಾರೆ.

ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ದೇಶ ಮತ್ತು ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುವ ಕಾರಣ ಕಾರ್ಕಳ ಪ್ರವಾಸೋದ್ಯಮದ ವಿವಿಧ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಅನುದಾನ ನೀಡುವಂತೆ ಸುನೀಲ್ ಕುಮಾರ್ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಶಾಸಕ ಸುನೀಲ್ ಕುಮಾರ್ ಲಿಖಿತ ಮನವಿ ಸಲ್ಲಿಸಿದ್ದಾರೆ.ಈ ಕುರಿತು ಶೀಘ್ರವಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಶೆಖಾವತ್ ಭರವಸೆ ನೀಡಿದ್ದಾರೆ ಎಂದು‌ ತಿಳಿದು ಬಂದಿದೆ.

- Advertisement -

Latest News

error: Content is protected !!