- Advertisement -
![]()
- Advertisement -
ಉಡುಪಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯ ನಿಲ್ಲಿಸಲು ತಕ್ಷಣ ಕ್ರಮ ವಹಿಸುವಂತೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತಾಗಿ ಪ್ರಧಾನ ನರೇಂದ್ರ ಮೋದಿ ಅವರಿಗೆ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ತಡಮಾಡದೇ ಈ ಸಂಬಂಧ ಕಾರ್ಯಪ್ರವೃತ್ತವಾಗಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ ತಕ್ಷಣ ಸಾಧ್ಯವಿರುವ ಎಲ್ಲಾ ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಬಾಂಗ್ಲಾ ದೇಶದಲ್ಲಿರುವ ಹಿಂದುಗಳ ರಕ್ಷಣೆ ನೆಮ್ಮದಿಗೆ ಸೂಕ್ತ ವ್ಯವಸ್ಥೆಯಾಗಬೇಕು ಎಂದು ಪ್ರಧಾನಿ ಮೋದಿಗೆ ಪೇಜಾವರ ಶ್ರೀ ಆಗ್ರಹಿಸಿದ್ದಾರೆ.
ಇದೇ ವೇಳೆ ಜನವರಿ 10 ರಂದು ದೇಶದ ಎಲ್ಲಾ ಹಿಂದುಗಳು ತಮ್ಮ ಮನೆಗಳಲ್ಲಿ ಪ್ರತ್ಯೇಕವಾಗಿ ಒಂದು ದೀಪ ಬೆಳಗಿಸಿ ಪ್ರಾರ್ಥಿಸುವಂತೆಯೂ ಪೇಜಾವರ ಸ್ವಾಮೀಜಿ ಮನವಿ ಮಾಡಿದ್ದಾರೆ.
- Advertisement -


