Wednesday, June 3, 2026
Homeತಾಜಾ ಸುದ್ದಿಖ್ಯಾತ ಪರಿಸರ ವಿಜ್ಞಾನಿ ಪ್ರೊ. ಮಾಧವ್ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಪ್ರೊ. ಮಾಧವ್ ಗಾಡ್ಗೀಳ್ ನಿಧನ

- Advertisement -
- Advertisement -

ಪುಣೆ: ಖ್ಯಾತ ಹಿರಿಯ ಪರಿಸರ ವಿಜ್ಞಾನಿ ಪ್ರೊ.‌ ಮಾಧವ್ ಗಾಡ್ಗೀಳ್ ಪುಣೆಯಲ್ಲಿ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಧವ್ ಗಾಡ್ಗೀಳ್ ಬುಧವಾರ ರಾತ್ರಿ ನಿಧನರಾಗಿದ್ದು, ಅವರಿಗೆ 83 ವರ್ಷ ವಯಸ್ಸಾಗಿತ್ತು.

ಪ್ರೊ. ಗಾಡ್ಗೀಳ್ ಅವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಪರಿಸರ ವಿಜ್ಞಾನ ಕೇಂದ್ರವನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಪದ್ಮಶ್ರೀ ಪ್ರಶಸ್ತಿ, ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ, ಚಾಂಪಿಯನ್ಸ್ ಆಫ್ ದಿ ಅರ್ಥ್ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಮಾಧವ್ ಗಾಡ್ಗೀಳ್ ಅವರು ಭಾಜನರಾಗಿದ್ದರು.

ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತಾಗಿ ಮಾಧವ್ ಗಾಡ್ಗೀಳ್ ಅಧ್ಯಕ್ಷತೆಯಲ್ಲಿ ಗಾಡ್ಗೀಳ್ ಸಮಿತಿಯನ್ನು ರಚಿಸಲಾಗಿತ್ತು. ಪ್ರಧಾನಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಸದಸ್ಯರಾಗಿಯೂ ಪ್ರೊ. ಮಾಧವ್ ಗಾಡ್ಗೀಳ್ ಕಾರ್ಯನಿರ್ವಹಿಸಿದ್ದರು‌

- Advertisement -

Latest News

error: Content is protected !!