- Advertisement -
![]()
- Advertisement -
ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ದಂಡ ವಿಧಿಸುವ ಮಸೂದೆಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಗೆ ನೀಡಿದ್ದಾರೆ.
ಭಾರತದ ಜೊತೆಗೆ ಚೀನಾ ಮತ್ತು ಬ್ರೆಜಿಲ್ ಗೆ ದಂಡ ವಿಧಿಸುವ ಮಸೂದೆಗೆ ಡೊನಾಲ್ಡ್ ಟ್ರಂಪ್ ಸಮ್ಮತಿ ನೀಡಿದ್ದು, ಮೂರೂ ದೇಶಗಳು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುತ್ತಿವೆ.
ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಯುರೇನಿಯಂ ಖರೀದಿಸುವ ದೇಶಗಳ ಮೇಲೆ ಶೇಕಡಾ 500 ರಷ್ಟು ಸುಂಕ ವಿಧಿಸಲು ಉದ್ದೇಶಿತ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಯುದ್ಧ ಯಂತ್ರಕ್ಕೆ ಆರ್ಥಿಕವಾಗಿ ಸಹಾಯ ಮಾಡುತ್ತಿರುವ ದೇಶಗಳನ್ನು ಹದ್ದುಬಸ್ತಿನಲ್ಲಿಡಲು ಅಮೆರಿಕಾ ಸುಂಕದ ಕ್ರಮಕ್ಕೆ ಮುಂದಾಗಿದೆ.
ಸ್ಯಾಂಕ್ಷನಿಂಗ್ ರಷ್ಯಾ ಆಕ್ಟ್ 2025 ಹೆಸರಿನ ಈ ಮಸೂದೆ ಮುಂದಿನ ವಾರವೇ ಅಮೆರಿಕದ ಕಾಂಗ್ರೆಸ್‌ನಲ್ಲಿ ಮಂಡನೆಯಾಗುವ ನಿರೀಕ್ಷೆಯಿದೆ.
- Advertisement -


