Wednesday, October 14, 2026
Homeಕರಾವಳಿಉಡುಪಿಉಡುಪಿ: ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ಧ ಸಾವು

ಉಡುಪಿ: ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ಧ ಸಾವು

- Advertisement -
- Advertisement -

ಉಡುಪಿ: ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ಉಚ್ಚಿಲ ಬಸ್ಸು ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.ಪಣಿಯೂರು ಸೆಂಟರ್ ನಿವಾಸಿ ಸದಾಶಿವ ಕೋಟ್ಯಾನ್(65) ಮೃತರು.

ಪಡುಬಿದ್ರಿ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದಾಗ ಬೈಕ್, ರಸ್ತೆ ದಾಟುತ್ತಿದ್ದ ಸದಾಶಿವ ಅವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಮೃತರು ಮೂಳೂರಿನ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದು ಮನೆಯಿಂದ ಹೊಟೇಲಿಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!