Wednesday, June 24, 2026
Homeಕರಾವಳಿಬಂಟ್ವಾಳದ ವೃತದಾರಿ ಬಾಲಕ ಲಾರಿ ಢಿಕ್ಕಿಯಾಗಿ ಸಾವು

ಬಂಟ್ವಾಳದ ವೃತದಾರಿ ಬಾಲಕ ಲಾರಿ ಢಿಕ್ಕಿಯಾಗಿ ಸಾವು

- Advertisement -
- Advertisement -

ಬಂಟ್ವಾಳ: ಬಂಟ್ವಾಳದ ವೃತದಾರಿ ಬಾಲಕನೋರ್ವ ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸು ಮನೆಗೆ ಬರುವ ವೇಳೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಬಳಿಯಲ್ಲಿ ಲಾರಿ ಢಿಕ್ಕಿಯಾಗಿ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.

ಲಕ್ಷ್ಮೀಶ ಪೂಜಾರಿ( 15) ಎಂಬಾತ ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ.

ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್‌ ಪೂಜಾರಿ ಅವರ ಪುತ್ರ ಸಿದ್ದಕಟ್ಟೆಯ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಲಕ್ಷ್ಮೀಶ ಪೂಜಾರಿ, ಸಂತೋಷ್ ಪೂಜಾರಿ, ಸಚಿನ್‌, ಗೋಪಾಲಪೂಜಾರಿ, ಲಕ್ಷ್ಮೀಶ ಪೂಜಾರಿ, ಕಿರಣ್, ವರದ್ ರಾಜ್ ಅವರ ಜೊತೆಗೂಡಿ ಇನ್ನೋವಾ ಕಾರಿನಲ್ಲಿ ಒಟ್ಟು 7 ಮಂದಿ ಜ.7 ರಂದು ಕುರಿಯಾಳದಿಂದ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸು ಜ.9 ರಂದು ಬರುತ್ತಿದ್ದ ವೇಳೆ ಕೊಟೆಕಲ್ ಎಂಬಲ್ಲಿ ಇವರ ಕಾರು ಕೆಟ್ಟುಹೋಗಿದೆ ಎಂಬ ಕಾರಣಕ್ಕಾಗಿ ಅಶೋಕ್ ಪೂಜಾರಿ ಒಬ್ಬರು ಕಾರಿನೊಳಗೆ ಕುಳಿತು ಕೊಂಡು ಉಳಿದಂತೆ ಚಾಲಕ ಸೇರಿ ಏಳು ಮಂದಿ ಕೂಡ ಕಾರಿನ ಎದುರು ಬೊನೆಟ್ ಓಪನ್ ಮಾಡಿ ಕಾರು ರಿಪೇರಿಯಲ್ಲಿ ತೊಡಗಿದ್ದರು.ಸುಮಾರು 2 ಗಂಟೆ ವೇಳೆಗೆ ಯಮಸ್ವರೂಪಿ ಲಾರಿಯೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

- Advertisement -

Latest News

error: Content is protected !!