Wednesday, June 24, 2026
Homeಕರಾವಳಿಪ್ರತಿಷ್ಠಿತ ಶ್ರೀ ಕುಂದೇಶ್ವರ ಪ್ರಶಸ್ತಿಗೆ ಕಾವ್ಯಶ್ರೀ ಅಜೇರು ಹಾಗೂ ಉಮೇಶ್ ಮಿಜಾರು ಆಯ್ಕೆ

ಪ್ರತಿಷ್ಠಿತ ಶ್ರೀ ಕುಂದೇಶ್ವರ ಪ್ರಶಸ್ತಿಗೆ ಕಾವ್ಯಶ್ರೀ ಅಜೇರು ಹಾಗೂ ಉಮೇಶ್ ಮಿಜಾರು ಆಯ್ಕೆ

- Advertisement -
- Advertisement -

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತ ರಾದ ಕಾವ್ಯಶ್ರೀ ಅಜೇರು ಹಾಗೂ ರಂಗಭೂಮಿ ಕಲಾವಿದರಿಗೆ ನೀಡಲಾಗುವ ಕುಂದೇಶ್ವರ ಕಲಾಭೂಣ ಭೂಷಣ ಪ್ರಶಸ್ತಿ ಈ ಬಾರಿ ಉಮೇಶ್ ಮಿಜಾರು ಅವರು ಆಯ್ಕೆಯಾಗಿದ್ದಾರೆ.

ಜ.23ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿ.ರಾಘವೇಂದ್ರ ಭಟ್ ಸ್ಮರಣಾರ್ಥ, ಕ್ಷೇತ್ರದ ವತಿಯಿಂದ ಪ್ರಶಸ್ತಿ ನೀಡಲಾಗುತ್ತಿದೆ.

ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಜನವರಿ 21ರಿಂದ 23ರವರೆಗೆ ವರ್ಷಾವಧಿ ಜಾತ್ರೆ ನಡೆಯಲಿದ್ದು, ಜ.23ರಂದು ರಾತ್ರಿ7 ಗಂಟೆಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ ಕದ್ರಿ ಮಹಿಳಾ ಯಕ್ಷಕೂಟ ದವರಿಂದ ಮಹಿಳಾ ಯಕ್ಷಗಾನ, ನಮ್ಮ ಬೆದ್ರ ತಂಡದವರಿಂದ ತುಳು ನಾಟಕ ನಡೆಯಲಿದೆ. ಇದೇ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು.

- Advertisement -

Latest News

error: Content is protected !!