Saturday, June 6, 2026
Homeತಾಜಾ ಸುದ್ದಿಯಾವ ಸಮಯಕ್ಕೆ ರಾಜ್ಯ ರಾಜಕಾರಣಕ್ಕೆ ಬರಬೇಕು ಅಂತಾ ತೀರ್ಮಾನ ಮಾಡುತ್ತೇನೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...

ಯಾವ ಸಮಯಕ್ಕೆ ರಾಜ್ಯ ರಾಜಕಾರಣಕ್ಕೆ ಬರಬೇಕು ಅಂತಾ ತೀರ್ಮಾನ ಮಾಡುತ್ತೇನೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ

- Advertisement -
- Advertisement -

ಬೆಂಗಳೂರು: ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕೀಯಕ್ಕೆ ಬರುವ ವಿಚಾರವಾಗಿ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

ಬೆಂಗಳೂರಿನ‌ ಜೆ.ಪಿ. ನಗರದಲ್ಲಿರುವ ತಮ್ಮ ಖಾಸಗಿ ನಿವಾಸದಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಯಾವ ಸಮಯಕ್ಕೆ ರಾಜ್ಯ ರಾಜಕೀಯಕ್ಕೆ ಬರಬೇಕು ಅಂತ ತೀರ್ಮಾನ ಮಾಡುತ್ತೇನೆ,
ನಾನು ಎಲ್ಲಿರಬೇಕು ಅಂತ ರಾಜ್ಯದ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

ಈ ಮೂಲಕ ಪರೋಕ್ಷವಾಗಿ 2028ರ ವಿಧಾನಸಭೆ ಚುನಾವಣೆ ವೇಳೆಗೆ ರಾಜ್ಯ ರಾಜಕೀಯಕ್ಕೆ ವಾಪಾಸಾಗುವ ಸುಳಿವನ್ನು ಕುಮಾರಸ್ವಾಮಿ ನೀಡಿದ್ದಾರೆ.

ಮಕರ ಸಂಕ್ರಾಂತಿಯ ಹಬ್ಬದ ದಿನದಂದೇ ಕುಮಾರಸ್ವಾಮಿ ರಾಜ್ಯ ರಾಜಕೀಯಕ್ಕೆ ಮರಳುವ ಬಗ್ಗೆ ಮಾತನಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸದ್ಯ ಹೆಚ್.ಡಿ.‌ ಕುಮಾರಸ್ವಾಮಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಇಲಾಖೆಗಳನ್ನು ‌ನಿರ್ವಹಿಸುತ್ತಿದ್ದಾರೆ.

- Advertisement -

Latest News

error: Content is protected !!