- Advertisement -
![]()
- Advertisement -
ಕಾರವಾರ: ಮಹಿಳೆಯೊಬ್ಬರು ಗೋಕರ್ಣ ಪ್ಯಾರಡೈಸ್ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಬೋಟಿಂಗ್‌ಗೆ ತೆರಳದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಂಗಳೂರು ನಿವಾಸಿ ನಾಗರತಿನಮ್ (58) ಎಂದು ಗುರುತಿಸಲಾಗಿದೆ.
ಅವರು ತಮ್ಮ ಕುಟುಂಬದ ಜೊತೆಗೆ ಬೆಂಗಳೂರಿನಿಂದ ಆಗಮಿಸಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ತಕ್ಷಣ 108 ಆಂಬುಲೆನ್ಸ್‌ಗೆ ಕರೆ ಮಾಡಿದರೂ ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಂದಿಲ್ಲ. ನಂತರದಲ್ಲಿ ಕುಮಟಾದಿಂದ ಖಾಸಗಿ ಅಂಬುಲೆನ್ಸ್ ಕರೆಸಿ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಹಿಳೆ ಅಸುನೀಗಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


