- Advertisement -


- Advertisement -
ಕಾರ್ಕಳ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ.
ಮುದ್ದಣ್ಣ ನಗರದ ವಾರಿಜಾ ಎಂಬವರ ಮನೆಯಲ್ಲಿ ಈ ಅನಾಹುತ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಪೀಠೋಪಕರಣ, ವಾಷಿಂಗ್ ಮಷೀನ್, ಪಾತ್ರೆಗಳು ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಂಡಿವೆ.
ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ್ದರಿಂದ ಯಾರಿಗೂ ಹಾನಿಯಾಗಿಲ್ಲ. ಅಲ್ಲದೆ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.ಘಟನೆಯಲ್ಲಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿದ್ದಾಗಿ ತಿಳಿದುಬಂದಿದೆ.
- Advertisement -


