Friday, June 5, 2026
Homeಕರಾವಳಿಮಂಗಳೂರುಮಂಗಳೂರು; ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ...

ಮಂಗಳೂರು; ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

- Advertisement -
- Advertisement -

ಮಂಗಳೂರು; ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಆಲ್ಫೋನ್ಸ್ ಸಲ್ದಾಣ ಶಿಕ್ಷೆಗೆ ಗುರಿಯಾಗಿರುವ ಆರೋಪಿ.

ಪ್ರಕರಣದ ವಿವರ;

ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ದಿನಾಂಕ: 29-04-2020ರಂದು ಆರೋಪಿ ಆಲ್ಫೋನ್ಸ್ ಸಲ್ದಾಣನು ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನನ್ನು ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಗಲಾಟೆ ಮಾಡಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದಲ್ಲದೇ, ರಕ್ಷಿಸಲು ಧಾವಿಸಿ ಬಂದ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನ ಪತ್ನಿ ಶ್ರೀಮತಿ ಹೆಲೆನ್ ಡಿ.ಸೋಜಾ ಯಾನೆ ಹೆಲೆನ್ ರೋಸಿ ರೋಡ್ರಿಗಸ್ ಳನ್ನು ಅಟ್ಟಾಡಿಸಿ ಚೂರಿಯಿಂದ ಅಮಾನುಷವಾಗಿ ತಿವಿದು ಕೊಲೆ ಗೈದಿದ್ದು ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 31/2020 ಕಲಂ 341, 504, 506, 302 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು, ಅಂದಿನ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಜಯರಾಮ ಡಿ. ಗೌಡ ರವರು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದು ತನಿಖಾ ಸಹಾಯಕರಾಗಿ ಮುಲ್ಕಿ ಪೊಲೀಸ್ ಠಾಣೆಯ ಎಎಸ್ಐ ಉಮೇಶ್ ಕೆ ಹಾಗೂ ಹೆಚ್ ಸಿ. 725 ನೇ ವಾದಿರಾಜ ರವರು ತನಿಖಾ ಸಹಾಯಕರಾಗಿ ತನಿಖೆಗೆ ಸಹಕರಿಸಿರುತ್ತಾರೆ. ಈ ಪ್ರಕರಣವು ನ್ಯಾಯಾಲಯದಲ್ಲಿ ಎಸ್ ಸಿ ನಂಬ್ರ; 69/2020 ರಂತೆ ವಿಚಾರಣೆ ನಡೆದಿದ್ದು  ಮಾನ್ಯ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನರವರು ವಿಚಾರಣೆ ನಡೆಸಿ ಪ್ರಸ್ತುತ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಆರೋಪಿಗೆ ದಿನಾಂಕ: 19-01-2026 ರಂದು ಜೀವಾವಧಿ ಶಿಕ್ಷೆಯನ್ನು ವಿಧಿಸಿರುತ್ತಾರೆ. ಹಾಗೂ 2 ಲಕ್ಷ ರೂ ದಂಡ ವಿಧಿಸಿರುತ್ತಾರೆ. ಸಾಕ್ಷಿ ವಿಚಾರಣೆ ಸಮಯ ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ರವರು ಅಭಿಯೋಜನೆ ಪರ ವಾದ ಮಂಡಿಸಿರುತ್ತಾರೆ. ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆ ಸಮಯ ಮುಲ್ಕಿ ಪೊಲೀಸ್ ಠಾಣಾ ಮಪಿಸಿ 827ನೇ ಕಾವ್ಯಾರವರು ಸಹಕರಿಸಿರುತ್ತಾರೆ.

- Advertisement -

Latest News

error: Content is protected !!