Friday, June 5, 2026
Homeಕರಾವಳಿಮಂಗಳೂರುಸುಳ್ಯ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ 5 ವರ್ಷ ಜೈಲು ಶಿಕ್ಷೆ...

ಸುಳ್ಯ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶ

- Advertisement -
- Advertisement -

ಸುಳ್ಯ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಬೆಳ್ಳಾರೆ ದರ್ಖಾಸು ನಿವಾಸಿ ಮರುದ್ಯೆ ಎಂಬವರ ಪುತ್ರ ಎಂ. ಸೆಲ್ವಕುಮಾರ್ ಶಿಕ್ಷೆಗೆ ಒಳಗಾದ ವ್ಯಕ್ತಿ.

ಎಂ. ಸೆಲ್ವಕುಮಾರ್‌ಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಈತ ದರ್ಖಾಸು ಎಂಬಲ್ಲಿ ಬಾಡಿಗೆ ಮನೆಯಲ್ಲಿದ್ದಾಗ  2022ರಲ್ಲಿ ಪಕ್ಕದ ಮನೆಯ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಾಕಲೇಟ್ ಕೊಡುವುದಾಗಿ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದನು. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು.

ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ (POCSO) ವಿಶೇಷ ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಸಂತ್ರಸ್ತ ಬಾಲಕಿಯು ನ್ಯಾಯಾಲಯದ ಮುಂದೆ ಆರೋಪಿಯ ವಿರುದ್ಧ ವಿವರವಾದ ಹೇಳಿಕೆಯನ್ನು ನೀಡಿದ್ದರು.

ಬೆಳ್ಳಾರೆ ಪೊಲೀಸ್ ಠಾಣೆಯ ಆಗಿನ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು ಹಾಗೂ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದರು. ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶೆ ಸರಿತಾ ಡಿ. ಅವರು ಆರೋಪಿಯನ್ನು ದೋಷಿ ಎಂದು ಘೋಷಿಸಿ ಈ ಕೆಳಗಿನಂತೆ ಶಿಕ್ಷೆ ಪ್ರಕಟಿಸಿದ್ದಾರೆ.

ಪೋಕ್ಸೋ ಕಾಯ್ದೆಯಡಿ: ಐಪಿಸಿ ಕಲಂ 354 ಮತ್ತು ಪೋಕ್ಸೋ ಕಾಯ್ದೆಯ ಕಲಂ 10ರ ಅಡಿಯಲ್ಲಿ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 20,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ಅನುಭವಿಸಬೇಕಾಗುತ್ತದೆ.ಬೆದರಿಕೆ ಪ್ರಕರಣ (ಐಪಿಸಿ 506): ಜೀವಬೆದರಿಕೆ ಒಡ್ಡಿದ ಆರೋಪಕ್ಕಾಗಿ 1 ವರ್ಷದ ಸಾದಾ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ.

- Advertisement -

Latest News

error: Content is protected !!