Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮನೆಗೆ ಮರಳಿದ ನಾಪತ್ತೆಯಾಗಿದ್ದ ವೃದ್ಧ

ಬೆಳ್ತಂಗಡಿ : ಮನೆಗೆ ಮರಳಿದ ನಾಪತ್ತೆಯಾಗಿದ್ದ ವೃದ್ಧ

- Advertisement -
- Advertisement -

ಬೆಳ್ತಂಗಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದವರು ಮರಳಿ ಮನೆಗೆ ಬಂದಿದ್ದು. ಪ್ರಕರಣ ಸುಖಾಂತ್ಯ ಕಂಡಿದೆ. ವೃದ್ಧನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ: ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಕೊಕ್ರಾಡಿ ಎಂಬಲ್ಲಿ ಒಬ್ಬರೇ ವಾಸವಾಗಿದ್ದ ರಾಘು ಶೆಟ್ಟಿ @ ಅನ್ನೋಜಿ(70) ಎಂಬವರು ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಮಂಗಳೂರು ಆಸ್ಪತ್ರೆಯಿಂದ ಔಷದಿ ಇದ್ದು. ಕಳೆದ ಒಂದೂವರೆ ವರ್ಷಗಳಿಂದ ಕೊಕ್ರಾಡಿ ಚಿಕ್ಕಪ್ಪನೊಂದಿಗೆ ವಾಸವಾಗಿದ್ದರು.  ಜ.18 ರಂದು ಸಂಜೆ 3 ಗಂಟೆಗೆ ಯಾರು ಇಲ್ಲದ ವೇಳೆಗೆ ಮನೆಯಿಂದ ಹೊರಹೋದವರು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಈತನಕ ಪತ್ತೆಯಾಗದ ಕಾರಣ ವೇಣೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾದ ರಘು ಶೆಟ್ಟಿಯವರ ಮಗ ಹೊಸಂಗಡಿ ಗ್ರಾಮದ ಕುರ್ಲೋಟ್ಟು ನಿವಾಸಿ ಅಶೋಕ್ ಶೆಟ್ಟಿ ಜ.21 ರಂದು ದೂರು ನೀಡಿದ್ದರು.

ಮನೆಯಿಂದ ನಾಪತ್ತೆಯಾಗಿದ್ದ ವೃದ್ಧ ರಾಘು ಶೆಟ್ಟಿ @ ಅನ್ನೋಜಿ (70) ಜ.23 ರಂದು ಮಧ್ಯಾಹ್ನದ ವೇಳೆಗೆ ಮರಳಿ ಮನೆಯತ್ತ ಬಂದಿದ್ದಾರೆ. ಇವರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು. ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

- Advertisement -

Latest News

error: Content is protected !!