Thursday, June 4, 2026
Homeಕರಾವಳಿಉಡುಪಿಖಾಸಗಿ ಬಸ್‌ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸಾವು

ಖಾಸಗಿ ಬಸ್‌ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸಾವು

- Advertisement -
- Advertisement -

ಕುಂದಾಪುರ: ಖಾಸಗಿ ಬಸ್‌ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.

ಮೃತ ಪಟ್ಟ ಯುವಕನನ್ನು ಸೌಕೂರು ನಿವಾಸಿ ವಿಜಯ್ (36) ಎನ್ನಲಾಗಿದೆ.

ವಿಜಯ್ ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು, ಶನಿವಾರ ಬೆಳಿಗ್ಗೆ ಆಹಾರ ವಸ್ತುಗಳನ್ನು ಖರೀದಿಸಿ ಬೈಕಿನಲ್ಲಿ ತಲ್ಲೂರು ಮೂಲಕ ಸೌಕೂರು ಕಡೆಗೆ ಮರಳುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.ಖಾಸಗಿ ಬಸ್‌ವೊಂದನ್ನು ಶೆಟ್ರಕಟ್ಟೆ ತಿರುವಿನಲ್ಲಿ ಓವರ್ ಟೇಕ್ ಮಾಡುವಾಗ ಎದುರಿನಿಂದ ಬಂದ ಇನ್ನೊಂದು ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ವಿಜಯ್‌ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!