Wednesday, June 24, 2026
Homeತಾಜಾ ಸುದ್ದಿರಾಜ್ಯದ ಎಲ್ಲಾ ಗ್ರಾ.ಪಂ. ಗಳಿಗೆ ಮಹಾತ್ಮಾ ಗಾಂಧಿ ಹೆಸರು; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾ.ಪಂ. ಗಳಿಗೆ ಮಹಾತ್ಮಾ ಗಾಂಧಿ ಹೆಸರು; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯತ್ ಗಳಿಗೆ ಮಹಾತ್ಮಾ ಗಾಂಧಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಕೇಂದ್ರ ಸರ್ಕಾರದ ವಿರುದ್ಧ ನಡೆದ ಮನರೇಗಾ ಬಚಾವೋ ಆಂದೋಲನದಲ್ಲಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ.

ಮಹಾತ್ಮ ಗಾಂಧಿ ಹೆಸರು ಕೇಳಿದರೆ ಬಿಜೆಪಿಯವರಿಗೆ ಆಗಲ್ಲ. ಹಾಗಾಗಿ ದುರುದ್ದೇಶದಿಂದ ಮನರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ ಜಾರಿ ಮಾಡಿದ್ದಾರೆ ಎಂದು ಆರೋಪಿಸಿರುವ ಸಿದ್ದರಾಮಯ್ಯ, ಮನರೇಗಾ ಯೋಜನೆಯಲ್ಲಿ ರಾಮ ಎನ್ನುವ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, ಆರ್ ಎಸ್ಎಸ್ ಮಾರ್ಗದರ್ಶನದಂತೆ ಬಡವರ ಕಾರ್ಯಕ್ರಮಗಳನ್ನು ಬಿಜೆಪಿಯವರು ರದ್ದು ಮಾಡಿದ್ದಾರೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಆರ್ ಎಸ್ ಎಸ್ ನವರಿಗೆ ಬಡವರು ಮುಖ್ಯವಾಹಿನಿಗೆ ಬರುವುದು ಬೇಕಾಗಿಲ್ಲ. ಬಡವರು ಬಡವರಾಗಿಯೇ ಉಳಿದು ಸದಾಕಾಲ ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ ಸಿದ್ಧಾಂತವಾಗಿದೆ ಎಂದು ಟೀಕಿಸಿದ್ದಾರೆ.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಘೋಷಣೆಯನ್ನು ಬೆಂಬಲಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡಾ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಮಹಾತ್ಮಾ ಗಾಂಧಿ ಹೆಸರು ಇರಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

- Advertisement -

Latest News

error: Content is protected !!