Saturday, June 6, 2026
Homeಅಪರಾಧಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಸೂಕ್ತ ತನಿಖೆಗೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜರಿಂದ ಗೃಹ...

ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಸೂಕ್ತ ತನಿಖೆಗೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜರಿಂದ ಗೃಹ ಸಚಿವರಿಗೆ ಆಗ್ರಹ

- Advertisement -
- Advertisement -

ಬೆಳ್ತಂಗಡಿ : ದೇವಸ್ಥಾನಕ್ಕೆ ಧನುಪೂಜೆಗೆ ಹೊರಟ್ಟಿದ್ದ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಸುಮಂತ್(15) ಎಂಬಾತನ ಮೃತದೇಹದ ಜ.14 ರಂದು ಬೆಳಗ್ಗೆ ಪತ್ತೆಯಾದ ಘಟನೆ ನಡೆದಿತ್ತು.

ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ ಸಚಿವರಾದ ಜಿ ಪರಮೇಶ್ವರ್ ರವರಿಗೆ ಆಗ್ರಹಿಸಿದರು.

ಸುಮಂತ್‌ನ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯ ಸಾರ್ವಜನಿಕರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ನಡೆಯದಂತೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಶೀಘ್ರದಲ್ಲೇ ನಿಖರವಾದ ಸತ್ಯವನ್ನು ಜನರ ಮುಂದಿಡಬೇಕು ಎಂದು ಶಾಸಕರು ಗೃಹ ಸಚಿವರನ್ನು ಭೇಟಿಯಾಗಿ ಒತ್ತಾಯಿಸಿದ್ದಾರೆ..

- Advertisement -

Latest News

error: Content is protected !!